ಜಾಮೀನು ನಿರಾಕರಣೆ : ಮತ್ತೆ ತಿಹಾರ್ ಜೈಲಿಗೆ ಡಿಕೆಶಿ!!

ಬೆಂಗಳೂರು:

       ಕರ್ನಾಟಕ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಜಾಮೀನು ಅರ್ಜಿಯ ತೀರ್ಪು ಪ್ರಕಟವಾಗಿದ್ದು, ಡಿಕೆಶಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.

      ಕಳೆದ ವಾರ ಮೂರು ದಿನಗಳ ಕಾಲ ನಡೆದ ವಾದ-ಪ್ರತಿವಾದ ಅಂತ್ಯಗೊಂಡ ನಂತರ ನ್ಯಾಯಾಧೀಶರು ಬುಧವಾರ ಮಧ್ಯಾಹ್ನ ತೀರ್ಪು ಪ್ರಕಟಿಸುವುದಾಗಿ ಆದೇಶ ನೀಡಿದ್ದರು. 

      ಇಡಿ ಪರ ವಕೀಲರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಕೆ ಶಿವಕುಮಾರ್‌ ಅವರು ಅವಶ್ಯಕತೆ ಇರುವುದರಿಂದ ಅವರಿಗೆ ಜಾಮೀನು ನೀಡದಂತೆ ಮನವಿಮಾಡಿಕೊಂಡಿದ್ದರು. ಹೀಗಾಗಿ ಇಡಿ ಪರ ವಕೀಲರ ವಾದಕ್ಕೆ ಮನ್ನಣೆ ನೀಡಿದ ನ್ಯಾಯಾಧೀಶರು ಜಾಮೀನು ನೀಡುವುದಕ್ಕೆ ನಿರಾಕರಣೆ ಮಾಡಿ ಆದೇಶ ಹೊರಡಿಸಿದೆ.

     ಡಿಕೆ ಶಿವಕುಮಾರ್ ಅವರ ಜಾರಿ ನಿರ್ದೇಶನಾಲಯ ಕಸ್ಟಡಿ ಅವಧಿ ಮುಗಿದ ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ ಸೆಪ್ಟೆಂಬರ್‌ 17ರಂದು ಡಿಕೆಶಿ ಅವರನ್ನು 14 ದಿನಗಳ ಕಾಲ (ಅಕ್ಟೋಬರ್‌ 1ರವರೆಗೆ) ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿತ್ತು.

     ಸತತ ನಾಲ್ಕು ದಿನಗಳ ವಿಚಾರಣೆ ಬಳಿಕ ಸೆಪ್ಟೆಂಬರ್ 3ರಂದು ಜಾರಿ ನಿರ್ದೇಶನಾಲಯ ಡಿ. ಕೆ. ಶಿವಕುಮಾರ್ ಬಂಧಿಸಿತ್ತು. ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿದ್ದು, ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. ಈಗ ಜಾಮೀನು ಸಿಗದ ಕಾರಣ ಡಿಕೆಶಿ ಮತ್ತೆ ತಿಹಾರ್ ಜೈಲಿಗೆ ಹೋಗಲಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

Recent Articles

spot_img

Related Stories

Share via
Copy link