ದೆಹಲಿ :
ಡಿಕೆಶಿ ಜಾಮೀನು ವಿರೋಧಿಸಿ ಇಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಂಡಿದ್ದು, ಡಿ.ಕೆ.ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿದ್ದ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ಮಂಜೂರು ಮಾಡಿದ್ದ ದೆಹಲಿ ಹೈಕೋರ್ಟ್ ನ ಕ್ರಮವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯವು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ ಅರ್ಜಿ ವಜಾ ಮಾಡಿದೆ.
ದೆಹಲಿ ಹೈಕೋರ್ಟ್ ಆದೇಶವನ್ನು ನ್ಯಾ. ರೋಹಿಂಗ್ಟನ್ ನಾರಿಮನ್ ಪೀಠ ಎತ್ತಿ ಹಿಡಿದಿದ್ದು, ಈ ಮೂಲಕ ಡಿಕೆಶಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
