ನವದೆಹಲಿ:
ಡಿ.ಕೆ.ಶಿವಕುಮಾರ್ಗೆ ಜಾಮೀನು ಸಿಕ್ಕ ಬೆನ್ನಲ್ಲೇ ಸಹೋದರ ಡಿ.ಕೆ.ಸುರೇಶ್ ಕೋರ್ಟ್ ಆವರಣದಲ್ಲಿ ಕಣ್ಣೀರಿಟ್ಟಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆ ಎದುರಿಸುತ್ತಿರುವ ಮತ್ತು ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ಕುರಿತ ತೀರ್ಪು ಇಂದು ಹೊರ ಬಿದ್ದಿದೆ. ಹೈಕೋರ್ಟ್ ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್ ಒಂದೇ ಸಾಲಿನಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್ ಗೆ ಷರತ್ತು ಬದ್ದ ಜಾಮೀನು ನೀಡಿ ಆದೇಶಿಸಿದ್ದಾರೆ.
ಡಿಕೆಶಿ ಇಡಿ ವಿಚಾರಣೆ ಎದುರುಸುತ್ತಿದ್ದ ದಿನಗಳಿಂದಲೂ ಅಣ್ಣನಿಗೆ ಬೆನ್ನೆಲುಬಾಗಿ ನಿಂತಿದ್ದ ಡಿ.ಕೆ.ಸುರೇಶ್, ಇಡಿ ಅಧಿಕಾರಿಗಳು ಅವರನ್ನು ಬಂಧಿಸಿದ ದಿನಗಳ ನಂತರ ಅಣ್ಣನ ಪರ ಜಾಮೀನಿಗಾಗಿ ತೀವ್ರವಾದ ಹೋರಾಟ ಕೂಡ ನಡೆಸಿದ್ದರು. ಸದ್ಯ ಡಿಕೆಶಿಗೆ ಜಾಮೀನು ಸಿಕ್ಕ ಖುಷಿಗೆ ಕಣ್ಣೀರಿಟ್ಟಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ