ಬಳ್ಳಾರಿ :
ನಾವು ಪಾರದರ್ಶಕವಾದ ಆಡಳಿತ ನಡೆಸುತ್ತೇವೆ. ನನ್ನ ಮಂತ್ರ ಕೇವಲ ಅಭಿವೃದ್ಧಿ ಮಂತ್ರ. ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಜಿಲ್ಲೆಯ ಸಮಸ್ಯೆ ಬಗೆಹರಿಸುವುದಕ್ಕೆ ಶ್ರಮಿಸುತ್ತೇನೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ.
ಹಿಂದೆ ಈ ಜಿಲ್ಲೆಯಲ್ಲಿ ಭಯದ ವಾತಾವರಣ ಇತ್ತು, ಆದರೆ ನಮ್ಮ ಆಡಳಿತದಲ್ಲಿ ಭಯಕ್ಕೆ ಅವಕಾಶ ಇಲ್ಲ, ಇಲ್ಲಿ ಪ್ರಜೆಗಳೇ ಪ್ರಭುಗಳು. ಯಾವ ಪಕ್ಷದ ಕಾರ್ಯಕರ್ತರ ಮೇಲೂ ದೌರ್ಜನ್ಯ ಆಗಬಾರದು ಎಂದು ಹೇಳಿದರು.
13 ಸಾವಿರ ಕೋಟಿ ವೆಚ್ಚದಲ್ಲಿ ಜಿಲ್ಲೆಯ ಸಂಪೂರ್ಣ ಅಭಿವೃದ್ಧಿಗೆ ಮೈತ್ರಿ ಸರ್ಕಾರ ಈಗಾಗಲೇ ಯೋಜನೆ ರೂಪಿಸಿದ್ದು, ಮೂಲಸೌಕರ್ಯ ಅಭಿವೃದ್ಧಿ, ನೀರಾವರಿ ಯೋಜನೆ, ನಿರುದ್ಯೋಗ ನಿವಾರಣೆ, ಶಿಕ್ಷಣ ಹೀಗೆ ಎಲ್ಲವೂ ಆ ಯೋಜನೆಯಲ್ಲಿ ಸೇರಿಕೊಂಡಿದೆ ಎಂದು ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದರು.
ರಾಮನಗರದಲ್ಲಿ ನಡೆದ ಭಾರಿ ರಾಜಕೀಯ ಬೆಳವಣಿಗೆಯ ಬಗ್ಗೆ ತುಟಿ ಬಿಚ್ಚದ ಡಿ.ಕೆ.ಶಿವಕುಮಾರ್, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇದ್ದ ವಿಷಯಗಳನ್ನೇ ತಮ್ಮ ಪದಗಳಲ್ಲಿ ಹೇಳಿ ಸುದ್ದಿಗೋಷ್ಠಿ ಮುಗಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ