ಬೆಂಗಳೂರು :
ಯಾರ ಬಳಿ ಚರ್ಚಿಸಿ ರಾಜ್ಯ ಸರ್ಕಾರ ರಾತ್ರಿ ಕರ್ಪ್ಯೂ ನಿರ್ಧಾರ ಕೈಗೊಂಡಿದೆ..? ರಾಜ್ಯದಲ್ಲಿ ರಾತ್ರಿ ಕರ್ಪ್ಯೂ ಹೇರಿಕೆ ಮಾಡುವ ಅಗತ್ಯ ಏನಿದೆ..? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು ಆಂತರಿಕ ಸಮಸ್ಯೆಗಳನ್ನು ಮುಚ್ಚಿ ಹಾಕಲು ಹಾಗೂ ಜನರ ದಿಕ್ಕು ತಪ್ಪಿಸಲು ಈ ರೀತಿ ಮಾಡುತ್ತಿದೆ. ರಾತ್ರಿ ಕರ್ಪ್ಯೂ ಹೇರಿಕೆ ಮಾಡುವ ಅಗತ್ಯವಾದರೂ ಏನಿದೆ..? ಸುಮ್ಮನೆ ಒಂದು ವರ್ಗಕ್ಕೆ ತೊಂದರೆ ಕೊಡಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ರೂಪಾಂತರಿ ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರದ ಕ್ರಮಗಳು ಹುಚ್ಚರ ಸಂತೆಯಲ್ಲಿ ತೆಗೆದುಕೊಳ್ಳುವ ನಿರ್ಧಾರದಂತಿದೆ.
ಕಾಟಾಚಾರದ ರಾತ್ರಿ ಕರ್ಪ್ಯೂ ಹೇರಿ ಸರ್ಕಾರ ಏನನ್ನು ಸಾಧಿಸಲು ಹೊರಟಿದೆ?
ವಿವೇಕಯುತ ಸರ್ಕಾರ ತೆಗೆದುಕೊಳ್ಳುವ ನಿರ್ಧಾರವೇ ಇದು?ಈ ಸರ್ಕಾರಕ್ಕೇ ಅರಳು ಮರಳೋ?
ಅಥವಾ ಸರ್ಕಾರ ನಡೆಸುವವರಿಗೆ ಅರಳು ಮರಳೋ?
ಅರ್ಥವಾಗುತ್ತಿಲ್ಲ. pic.twitter.com/H7dOkL7Nh0— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) December 24, 2020
ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ಈ ಕುರಿತು ಟ್ವೀಟ್ ಮಾಡಿದ್ದು, ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳು ಹುಚ್ಚರ ಸಂತೆಯಲ್ಲಿ ತೆಗೆದುಕೊಳ್ಳುವ ನಿರ್ಧಾರದಂತೆ ಇದೆ. ಕಾಟಾಚಾರಕ್ಕೆ ರಾತ್ರಿ ಕರ್ಫ್ಯೂ ಹೇರಿ ಸರ್ಕಾರ ಏನನ್ನು ಸಾಧಿಸಲು ಹೊರಟಿದೆ?, ವಿವೇಕಯುತ ಸರ್ಕಾರ ತೆಗೆದುಕೊಳ್ಳುವ ನಿರ್ಧಾರವೇ ಇದು?, ಸರ್ಕಾರಕ್ಕೆ ಅರಳು-ಮರಳೋ ಅಥವಾ ಸರ್ಕಾರ ನಡೆಸುವವರಿಗೆ ಅರಳು ಮರಳೋ? ಎಂದು ಅರ್ಥವಾಗುತ್ತಿಲ್ಲ ಎಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
