ರಾಮನಗರ :
ಕನಕಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜಿಗಾಗಿ ಮತ್ತೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ತಮ್ಮ ಬಿಗಿಪಟ್ಟು ಮುಂದುವರೆಸಿದ್ದಾರೆ.
ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಕನಕಪುರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ಬಿಜೆಪಿ ಸರ್ಕಾರ ಬಂದ ನಂತರ ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರ ಮಾಡಿ ಶಂಕುಸ್ಥಾಪನೆ ಮಾಡಲಾಗಿದೆ. ಈ ಮೆಡಿಕಲ್ ಕಾಲೇಜು ವಿಚಾರವೇ ಉಪ ಚುನಾವಾಣೆಯಲ್ಲಿ ಆರೋಪ ಮತ್ತು ಪ್ರತ್ಯಾರೋಪಗಳಿಗೆ ಕಾರಣವಾಗಿತ್ತು.

ಈಗ ಜಿಲ್ಲೆಯ ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ರದ್ದುಪಡಿಸಿರುವ ಆದೇಶವನ್ನು ಹಿಂತೆಗೆದುಕೊಂಡು ಕನಕಪುರದಲ್ಲೇ ಮೆಡಿಕಲ್ ಕಾಲೇಜು ಸ್ಥಾಪನೆಗೆ ಮರು ಆದೇಶ ಹೊರಡಿಸಬೇಕೆಂದು ಆಗ್ರಹಿಸಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬರೆದಿದ್ದಾರೆ.

ಪತ್ರದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಆಗ್ರಹಿಸಿ ಹೋರಾಟದ ಎಚ್ಚರಿಕೆಯ ಅಂಶವನ್ನೂ ಪ್ರಸ್ತಾಪಿಸಿದ್ದಾರೆ. ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಕೊಟ್ಟಿರುವುದಕ್ಕೆ ನನ್ನ ಅಭ್ಯಂತರವಿಲ್ಲ. ಆದರೆ ಕನಕಪುರಕ್ಕೆ ಮಂಜೂರಾಗಿದ್ದನ್ನು ರದ್ದುಮಾಡಿರುವುದಕ್ಕೆ ಆಕ್ಷೇಪವಿದೆ. ಕೂಡಲೇ ಕನಕಪುರಕ್ಕೆ ಮೆಡಿಕಲ್ ಕಾಲೇಜು ಮಂಜೂರು ಮಾಡಬೇಕು” ಎಂದು ಕೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








