ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್’ಗೆ ಡಾಕ್ಟರೇಟ್!!

ಬೆಂಗಳೂರು:

     ಕೇಂದ್ರ ಚುನಾವಣಾ ಆಯೋಗದ ಕರ್ನಾಟಕದ ಮುಖ್ಯಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ.

     100 ಘಟಿಕೋತ್ಸವವನ್ನು ಆಚರಿಸಿಕೊಂಡ ರಾಜ್ಯದ ಮೊದಲ ವಿಶ್ವವಿದ್ಯಾನಿಲಯವಾಗಿರುವ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ಡಾ. ಶ್ರೀಜಯ್ ದೇವರಾಜ್ ಅರಸ್ ಅವರ ಮಾರ್ಗದರ್ಶನದಲ್ಲಿ ‘MGNREGA, Rights, Processes and Sustainble Livelihood: A Critical Study in Karnataka’ ಎಂಬ ಸಂಶೋಧನಾ ಪ್ರಬಂಧವನ್ನು ಮಂಡಿಸಿದ್ದರು.

     ನಿನ್ನೆ (ಅ. 19) ನಡೆದ ಮೈಸೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ.

     ಹಿರಿಯ ಐಎಎಸ್ ಅಧಿಕಾರಿ ಆಗಿರುವ 58 ವರ್ಷದ ಸಂಜೀವ್ ಕುಮಾರ್ ಅವರು ಪ್ರಸ್ತುತ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವಾಗಲೇ ಉನ್ನತ ಅಧ್ಯಯನ ಮಾಡಿದ್ದಾರೆ.  

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

      

Recent Articles

spot_img

Related Stories

Share via
Copy link
Powered by Social Snap