ಬೆಂಗಳೂರು :
ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ದೇಶದಾದ್ಯಂತ ವೈದ್ಯಕೀಯ ಸಂಸ್ಥೆಗಳು ಪ್ರತಿಭಟನೆಗೆ ಮುಂದಾಗಿದ್ದು, ಮುಷ್ಕರದ ಬಿಸಿ ರಾಜ್ಯಕ್ಕೂ ತಟ್ಟಿದೆ.
ಇಂದು ಬೆಳಗ್ಗೆ 6 ಗಂಟೆಯಿಂದ ಜೂನ್ 18 ರ ಬೆಳಗ್ಗೆ 6 ಗಂಟೆ ತನಕ ವೈದ್ಯರು ಪ್ರತಿಭಟನೆ ನಡೆಸಲಿದ್ದು ಕರ್ನಾಟಕದ ವೈದ್ಯರು ಕೂಡ ‘ಸೇವ್ ಡಾಕ್ಟರ್ಸ್’ ಘೋಷಣೆಯಡಿ ಪ್ರತಿಭಟನೆಗೆ ಸಾಥ್ ಕೊಡಲಿದ್ದಾರೆ ,ಆದಕಾರಣ ರಾಜ್ಯದ್ಯಾಂತ ಸುಮಾರು 4500 ಖಾಸಗಿ ಆಸ್ಪತ್ರೆಗಳಲ್ಲಿ ಓಪಿಡಿ ಬಂದ್ ಆಗಿದೆ.
ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಮತ್ತು ಕೇಂದ್ರ ಸರ್ಕಾರಿ ಸ್ವಾಮ್ಯದ ನಿಮ್ಹಾನ್ಸ್, ಇಎಸ್‍ಐ ಆಸ್ಪತ್ರೆಗಳಲ್ಲಿನ ಹೊರ ರೋಗಿಗಳ ಚಿಕಿತ್ಸಾ ವಿಭಾಗ ಸಂಪೂರ್ಣ ಸ್ಥಗಿತಗೊಂಡಿದ್ದರಿಂದ ಆರೋಗ್ಯ ಸೇವೆ ಅಸ್ತವ್ಯಸ್ತಗೊಂಡು ಸಾರ್ವಜನಿಕರು ಪರದಾಡುವಂತಾಗಿದೆ.
ಬೆಂಗಳೂರಿನ ನಿಮ್ಹಾನ್ಸ್, ಬೆಂಗಳೂರಿನ ರಾಜಾಜಿನಗರ, ಕಲಬುರಗಿಯ ಇಎಸ್‍ಐ ಆಸ್ಪತ್ರೆಗಳು ಕೇಂದ್ರ ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿದ್ದು, ಅಲ್ಲಿನ ವೈದ್ಯರು ಹೊರರೋಗಿಗಳ ಚಿಕಿತ್ಸಾ ವಿಭಾಗವನ್ನು ಸ್ಥಗಿತಗೊಳಿಸಿದ್ದರು. ಇದರಿಂದಾಗಿ ದೂರದ ಊರಿನಿಂದ ಬಂದ ರೋಗಿಗಳು ವೈದ್ಯರ ಪ್ರತಿಭಟನೆಯಿಂದಾಗಿ ತೊಂದರೆ ಅನುಭವಿಸುವಂತಾಗಿದೆ ಎಂದು ಆರೋಪಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ