ಮಿಂಟೋ ಆಸ್ಪತ್ರೆ ಪ್ರಕರಣ : ಕರವೇ ಕಾರ್ಯಕರ್ತರು ಪೊಲೀಸರಿಗೆ ಶರಣು!!

ಬೆಂಗಳೂರು:

      ಮಿಂಟೋ ಆಸ್ಪತ್ರೆ ವೈದ್ಯರ ಮೇಲಿನ ಹಲ್ಲೆ ವಿಚಾರಕ್ಕೆ ಸಂಬಂಧಿಸಿದಂತೆ ಕರವೇ ಕಾರ್ಯಕರ್ತರು ಪೊಲೀಸರಿಗೆ ಶರಣಾಗಿದ್ದಾರೆ.

      ಕರವೇ ಅಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ನಿನ್ನೆ ತಡರಾತ್ರಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಂಡಿದ್ದಾರೆ ಎನ್ನಲಾಗಿದ್ದು, ವಿವಿಪುರಂ ಪೊಲೀಸ್ ಠಾಣೆಯಲ್ಲಿ ಕರವೇ ಮಹಿಳಾ ಘಟಕದ ಅಧ್ಯಕ್ಷೆ ಅಶ್ಚಿನಿ ಗೌಡ ಸೇರಿದಂತೆ ಅನೇಕ ಕಾರ್ಯಕರ್ತರು ಪೊಲೀಸರಿಗೆ ಶರಣಾಗಿದ್ದಾರೆ.

       ಅಶ್ವಿನಿಗೌಡ ಮಾತನಾಡಿ, ವೈದ್ಯರಿಗೆ ಹೆದರಿ ಈ ತೀರ್ಮಾನ ತೆಗೆದುಕೊಂಡಿಲ್ಲ. ಜನರಿಗೆ ತೊಂದರೆಯಾಗಬಾರದೆಂದು ಈ ನಿರ್ಧಾರ ಮಾಡಿದ್ದೇವೆ ಜೊತೆಗೆ ಕರವೇ ಕಾರ್ಯಕರ್ತರು ಶರಣಾದ ಮೇಲೆ ಪ್ರತಿಭಟನೆ ಹಿಂಪಡೆಯುವುದಾಗಿ ವೈದ್ಯರು ತಿಳಿಸಿದ್ದಾರೆ. ರೋಗಿಗಳು ಚಿಕಿತ್ಸೆಗಾಗಿ ಪರದಾಡುವ ಸ್ಥಿತಿ ಬರಬಾರದೆಂಬ ಕಾರಣ ಶರಣಾಗುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ವೈದ್ಯರ ಮುಷ್ಕರ-ಓಪಿಡಿ ಬಂದ್ : ರೋಗಿಗಳ ಪರದಾಟ!!

       ಮಿಂಟೋ ಆಸ್ಪತ್ರೆಯಲ್ಲಿ ದಾಖಲಾದ 22 ಬಡ ರೋಗಿಗಳು ಕಣ್ಣು ಕಳೆದುಕೊಂಡಿದ್ದಾರೆ ಎಂದು ಆರೋಪಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ನಮ್ಮ ಮೇಲೆ ಕರವೇ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮಿಂಟೋ ಆಸ್ಪತ್ರೆ ವೈದ್ಯರು ಪ್ರತಿಭಟನೆ ಆರಂಭಿಸಿದ್ದರು.

     ಮೊದಲು ಶರಣಾಗಲಿ ಬಳಿಕ ಪ್ರತಿಭಟನೆ ಹಿಂತೆಗೆದುಕೊಳ್ಳುತ್ತೇವೆ ಎಂದು ಐಎಂಎ ತಿಳಿಸಿದೆ. ಪ್ರತಿಭಟನೆ ಹಿಂಪಡೆಯುವ ಬಗ್ಗೆ ವಿಕ್ಟೋರಿಯ ಆಸ್ಪತ್ರೆ ಡೀನ್ ಜೊತೆಗೆ ಮಾತುಕತೆ ನಡೆಯುತ್ತಿದೆ. ಚರ್ಚೆ ಬಳಿಕ ಮುಷ್ಕರ ಕೈ ಬಿಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎನ್ನಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link