ಬೆಂಗಳೂರು:

ಪ್ರೀತಿಸಿ ಮದುವೆಯಾಗಿದ್ದ ನವದಂಪತಿಗಳಿಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ವೀರಾಪುರದ ಬಳಿ ನಡೆದಿದೆ.
ದೊಡ್ಡಬಳ್ಳಾಪುರ ನಗರದ ಕಚೇರಿ ಪಾಳ್ಯ ನಿವಾಸಿ ವಿಜಯ್ ಹಾಗೂ ಶಾಂತಿನಗರದ ಲೀಲಾವತಿ ಆತ್ಮಹತ್ಯೆ ಮಾಡಿಕೊಂಡಿರುವ ನವದಂಪತಿಗಳು. ಲೀಲಾವತಿ ಮಾವ ಮಂಜುನಾಥ್ ಕಿರುಕುಳ ನೀಡಿದ್ದಾರೆ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾಹಿತಿ ತಿಳಿದ ರೈಲ್ವೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








