ಭಾರೀ ಮಳೆ : ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತ!!

ಚಿಕ್ಕಮಗಳೂರು :

     ಭಾರೀ ಮಳೆಯಿಂದಾಗಿ ಚಾರ್ಮಡಿ ಘಾಟಿಯ ಅಲೇಖಾನ್ ಬಳಿ ಗುಡ್ಡ ಕುಸಿದು ರಸ್ತೆಗೆ ಮಣ್ಣು ಬಿದ್ದಿದೆ. ಅಲೇಖಾನ್ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆಯಾಗಿದೆ.

     ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಚಿಕ್ಕಮಗಳೂರಿನಲ್ಲಿ ನಿನ್ನೆ ರಾತ್ರಿಯಿಂದ ಒಂದೇ ಸಮನೆ ಧಾರಾಕಾರ ಮಳೆ ಸುರಿಯುತ್ತಿದೆ. ಕೊಟ್ಟಿಗೆಹಾರ, ಚಾರ್ಮಾಡಿಯಲ್ಲೂ ಭಾರೀ ಮಳೆಯಾಗಿದ್ದು, ಚಾರ್ಮಾಡಿ ಘಾಟ್​ನಿಂದ ಆಲೇಖಾನ್​ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮೇಲೆ ಗುಡ್ಡ ಕುಸಿದ ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡಿದೆ.

     ಕಳಸ, ಕುದುರೆಮುಖ, ಕೆರೆಕಟ್ಟೆ ಭಾಗದಲ್ಲೂ 2 ದಿನಗಳಿಂದ ಸತತವಾಗಿ ಮಳೆಯಾಗುತ್ತಿದೆ. ಮಳೆಯಿಂದ ಹೇಮಾವತಿ ನದಿ ಮೈದುಂಬಿ ಹರಿಯುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap