ನೆಲಮಂಗಲ : ಬೆಳ್ಳಂಬೆಳಗ್ಗೆ​​ ಸರಣಿ ಅಪಘಾತ ; ಸ್ಥಳದಲ್ಲೇ ಇಬ್ಬರ ಸಾವು!!

ನೆಲಮಂಗಲ :

      ಬೆಳ್ಳಂಬೆಳಗ್ಗೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಬೈಕ್​ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನೆಲಮಂಗಲ ನಗರದಲ್ಲಿ ನಡೆದಿದೆ.

     ಮೃತ ಕಾರು ಚಾಲಕನನ್ನು ಸುನೀಲ್ ಎಂದು ಗುರುತಿಸಲಾಗಿದೆ. ಬೈಕ್ ಸವಾರನ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಲಾರಿ ಚಾಲಕ ಹಠಾತ್​ ಆಗಿ ಬ್ರೇಕ್ ಹಾಕಿದ ಹಿನ್ನೆಲೆ ಹಿಂದೆ ಬರುತ್ತಿದ್ದ ಓಮ್ನಿ ಕಾರ್​​ ಡಿಕ್ಕಿ ಹೊಡೆದಿದೆ. ಇದರ ಹಿಂದೆ ಬರುತ್ತಿದ್ದ ಬೈಕ್ ಕೂಡ ಓಮ್ನಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್​ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ವೇಗವಾಗಿ ಓಮ್ನಿ ಕಾರು ಲಾರಿಗೆ ಡಿಕ್ಕಿ ಹೊಡೆದ ಕಾರಣ ಕಾರಿನಲ್ಲಿದ್ದ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ.

     ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap