ಡಿ.ಕೆ.ಶಿವಕುಮಾರ್ ತಾಯಿ ಗೌರಮ್ಮಗೆ ಇಡಿ ಸಮನ್ಸ್!!

ಬೆಂಗಳೂರು :

      ಮಾಜಿ ಸಚಿವ ಡಿ.ಕೆ. ಶಿವಕುಮಾರ್ ರವರ ತಾಯಿ ಗೌರಮ್ಮಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.

      ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಇಡಿ ವಿಚಾರಣೆ ದಿನಕ್ಕೊಂದು ತಿರುವನ್ನು ಪಡೆಯುತ್ತಿದ್ದು, ಅವರ ನಿವಾಸ, ಕಚೇರಿಗಳ ಮೇಲೆ ಕಳೆದ ಹಲವು ದಿನಗಳ ಹಿಂದೆ ನಡೆದ ಐಟಿ ದಾಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಡಿಕೆ ಶಿವಕುಮಾರ್ ತಾಯಿಗೆ ಈಗ ಇಡಿ ಅಧಿಕಾರಿಗಳು ಸಮನ್ಸ್ ಜಾರಿ ಮಾಡಲಾಗಿದೆ. 

      ಗೌರಮ್ಮ ಅವರ ಖಾತೆಯಿಂದ ಕೋಟ್ಯಂತರ ರೂ. ಹಣ ವರ್ಗಾವಣೆಯಾಗಿದ್ದು ಅಲ್ಲದೇ ಗೌರಮ್ಮ ಹಾಗೂ ಡಿಕೆ ಶಿವಕುಮಾರ್, ಸುರೇಶ್ ಮಧ್ಯೆ ಹಣದ ವ್ಯವಹಾರವೂ ನಡೆದಿದೆ. ಗೌರಮ್ಮ ಅವರ ಬಳಿ 273 ಕೋಟಿ ರೂ ಬೇನಾಮಿ ಆಸ್ತಿ ಪತ್ತೆಯಾಗಿದೆ. ಹಾಗೆಯೇ ಐಶ್ವರ್ಯಗೂ 5 ಎಕರೆ ಜಮೀನು ಗಿಫ್ಟ್‌ ಡೀಡ್ ಆಗಿ ನೀಡಿದ್ದಾರೆ. ಇದೆಲ್ಲಾ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಇಡಿ ಸಮನ್ಸ್ ಜಾರಿ ಮಾಡಿದೆ. 

      ಈ ಹಿಂದೆ ಪುತ್ರಿ ಐಶ್ವರ್ಯ ಮತ್ತು ಸಹೋದರ ಡಿ.ಕೆ ಸುರೇಶ್ ಅವರಿಗೆ ಸಮನ್ಸ್ ನೀಡಿ ವಿಚಾರಣೆ ನಡೆಸಿದ್ದ ಇಡಿ ಅಧಿಕಾರಿಗಳು ಈಗ ಡಿಕೆಶಿ ತಾಯಿ ಗೌರಮ್ಮಗೂ ಸಮನ್ಸ್ ಕೊಟ್ಟಿದ್ದಾರೆ. ಈ ಮೂಲಕ ಡಿ.ಕೆ ಶಿವಕುಮಾರ್ ಸೇರಿ ಅವರ ಕುಟುಂಬದ ನಾಲ್ಕನೇ ಸದಸ್ಯರಿಗೆ ಇಡಿ ಸಮನ್ಸ್ ನೀಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap