ತುಮಕೂರು:
ಕಾಂಗ್ರೆಸ್ ಮುಖಂಡ, ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ.
ಸೆಪ್ಟೆಂಬರ್ 24ರಂದೇ ಇ.ಡಿ. ನೋಟಿಸ್ ನೀಡಿದೆ ಎನ್ನಲಾಗಿದ್ದು, ಅಕ್ಟೋಬರ್ 8ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಕೆ.ಎನ್.ರಾಜಣ್ಣ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಹರ್ಷ ಶುಗರ್ಸ್ ಸಂಸ್ಥೆಗೆ ಅಪೆಕ್ಸ್ ಬ್ಯಾಂಕಿನಿಂದ 300 ಕೋ.ರೂ. ಸಾಲ ನೀಡಲಾಗಿತ್ತು. ಇದೇ ವಿಚಾರವಾಗಿ ಈ.ಡಿ. ನೋಟಿಸ್ ನೀಡಿರಬಹುದು ಎಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ.
ಅ.9 ರಂದು ರಜಾ ದಿನವಾಗಿರುವುದರಿಂದ ಅ.9ರಂದು ವಿಚಾರಣೆಗೆ ಹೋಗುತ್ತೇನೆ ಎಂದು ರಾಜಣ್ಣ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ