ಬೆಂಗಳೂರು:
ಮಾಜಿ ಸಚಿವ ಹಾಗೂ ಶಾಸಕ ಡಿ.ಕೆ.ಶಿವಕುಮಾರ್ ಆಪ್ತೆ ಬೆಳಗಾವಿಯ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಜಾರಿ ನಿರ್ದೇಶನಾಲಯ ನೋಟೀಸ್ ಕಳುಹಿಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಶದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಕೇಸಿಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬಾಳ್ಕರ್‌ಗೆ ಇಡಿಯಿಂದ ನೋಟಿಸ್ ಕಳುಹಿಸಿದೆ ಎನ್ನಲಾಗಿದೆ. ಇದೇ ಸೆಪ್ಟಂಬರ್ 19 ರಂದು ವಿಚಾರಣೆಗೆ ಹಾಜರು ಇರುವಂತೆ ಹೇಳಿದೆ.
ಡಿ.ಕೆ ಶಿವಕುಮಾರ್ ಅವರ ಮೇಲೆ ಐಟಿ ದಾಳಿ ಮಾಡಿದ ವೇಳೆಯಲ್ಲಿ ಡಿ.ಕೆ ಶಿವಕುಮಾರ್ ಅವರು ಕೊನೆ ಬಾರಿ ಲಕ್ಷ್ಮೀ ಹೆಬ್ಬಾಳ್ಕರ್ ರವರಿಗೆ ಕರೆ ಮಾಡಿದ್ದರು ಎನ್ನಲಾಗಿದೆ. ಹೀಗಾಗಿ ಅವರಿಗೆ ಇಡಿ ವಿಚಾರಣೆಗೆ ಹಾಜರು ಇರುವಂತೆ ಹೇಳಿದೆ ಎಂದು ತಿಳಿದುಬಂದಿದೆ.
ಇಡಿ ನೀಡಿರುವ ನೋಟಿಸ್ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಲಕ್ಷ್ಮಿ ಹೆಬ್ಬಾಳ್ಕರ್ ನನಗೆ ನೋಟಿಸ್ ಸಿಕ್ಕಿರುವುದು ನಿಜ ನಾನು ಅಂದು ವಿಚಾರಣೆಗೆ ಹಾಜರಾಗಿ ಮಾಹಿತಿ ನೀಡುವೆ ಎಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
