ರಾತ್ರಿ ವೇಳೆ ಮತದಾರರಿಗೆ ತೊಂದರೆ ನೀಡುವಂತಿಲ್ಲ..!?

0
25

 ಬೆಂಗಳೂರು:

      ರಾತ್ರಿ ವೇಳೆಯಲ್ಲಿ ಚುನಾವಣಾ ಪ್ರಚಾರವನ್ನು ನಿರ್ಬಂಧಿಸಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆವರೆಗೆ ಚುನಾವಣಾ ಪ್ರಚಾರವನ್ನು ನಿರ್ಬಂದಿಸಲಾಗಿದೆ ಎಂದು ತಿಳಿಸಿದೆ.

      ಯಾವುದೇ ರಾಜಕೀಯ ಪಕ್ಷಗಳಾಗಲಿ ಅಥವಾ ಅಭ್ಯರ್ಥಿಗಳಾಗಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆ ಸಮಯದಲ್ಲಿ ಮತದಾರರ ಮನೆ ಮನೆಗೆ ತೆರಳುವುದು ಮತ್ತು ಧ್ವನಿವರ್ಧಕಗಳ ಬಳಕೆ ಹಾಗೂ ಮತದಾರರಿಗೆ ಕರೆ ಮಾಡುವುದು, ಸಂದೇಶ ಕಳುಹಿಸುವುದು, ವಾಟ್ಸಾಪ್ ಮಾಡುವುದು ಇತ್ಯಾದಿಗಳನ್ನು ಮಾಡಬಾರದು ಎಂದು ಸ್ಪಷ್ಟ ಸೂಚನೆ ನೀಡಿದೆ. 

       ಚುನಾವಣಾ ಪ್ರಚಾರ ಸಂದರ್ಭದಲ್ಲಿ ರಾಜಕೀಯ ಸಂದೇಶಗಳು ಜನರ ಖಾಸಗಿತನಕ್ಕೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಸಾಮಾಜಿಕ ಮಾಧ್ಯಮಗಳ ಮೂಲಕ ರಾಜಕೀಯ ಮುಖಂಡರು ಮತ್ತು ಪಕ್ಷಗಳು ಮತದಾರರನ್ನು ತಲುಪುವ ಪ್ರಯತ್ನಕ್ಕೆ ಚುನಾವಣಾ ಆಯೋಗ ಬ್ರೇಕ್ ಹಾಕಿದೆ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

LEAVE A REPLY

Please enter your comment!
Please enter your name here