ಹಾಸನ :
ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅಫಿಡವಿಟ್ ನಲ್ಲಿ ಸುಳ್ಳು ಮಾಹಿತಿ ನೀಡಿರುವ ಕುರಿತು ತನಿಖೆ ನಡೆಸಿದ ಚುನಾವಣಾ ಆಯೋಗ ಕ್ರಮ ಕೈಗೊಳ್ಳುವಂತೆ ಹಾಸನ ಜಿಲ್ಲಾಧಿಕಾರಿಗೆ ಸೂಚಿಸಿದೆ.
ಬಿಜೆಪಿ ಅಭ್ಯರ್ಥಿ ಎ. ಮಂಜು ಹಾಗೂ ವಕೀಲ ದೇವರಾಜೇಗೌಡ ಜಿಲ್ಲಾಧಿಕಾರಿಗೆ ಮತ್ತು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಹಾಸನದಲ್ಲಿರೋ ಕಲ್ಯಾಣ ಮಂಟಪ ಮತ್ತು ಮಾಜಿ ಪ್ರಧಾನಿ ದೇವೇಗೌಡರ ಬಳಿ ಪಡೆದಿರೋ ಸಾಲದ ಬಗ್ಗೆ ಮುಚ್ಚಿಟ್ಟಿದ್ದಾರೆ. ಅಫಿಡವಿಟ್ ನಲ್ಲಿ ಪ್ರಜ್ವಲ್ 7 ಕೋಟಿಗೂ ಹೆಚ್ಚು ಆದಾಯ ತೋರಿಸಿದ್ದಾರೆ. ಆದರೆ ಕೇವಲ ಮೂರು ಕೋಟಿಯಷ್ಟು ಮಾತ್ರ ಆದಾಯದ ಮೂಲ ತೋರಿಸಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು 23 ಲಕ್ಷ ರೂ. ಪ್ರಜ್ವಲ್ ಗೆ ಸಾಲ ನೀಡಿರೋದಾಗಿ ಹೇಳಿದ್ದಾರೆ. ಆದರೆ ಪ್ರಜ್ವಲ್ ಅಫಿಡವಿಟ್ ನಲ್ಲಿ ಆ ಮಾಹಿತಿ ಹಾಕಿಲ್ಲ ಎಂದು ಎ ಮಂಜು ಆರೋಪಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ಅಭ್ಯರ್ಥಿ ಎ.ಮಂಜು ಸುಳ್ಳು ಮಾಹಿತಿ ಗಂಭೀರ ಪ್ರಕರಣವಾಗಿದ್ದು, ಕ್ರಮ ಕೈಗೊಳ್ಳಲೇಬೇಕು. ಇಲ್ಲದ್ದಿದ್ದಲ್ಲಿ ಹೈಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
