ಗೋಕಾಕ್ : ಕುಡಿದು ಎಲೆಕ್ಷನ್ ಡ್ಯೂಟಿ ಗೆ ಬಂದ ಅಧಿಕಾರಿ ಸಸ್ಪೆಂಡ್!!

ಗೋಕಾಕ:

       ಪಾನಮತ್ತರಾಗಿ ಕರ್ತವ್ಯಕ್ಕೆ ಬಂದ ಚುನಾವಣಾಧಿಕಾರಿಯನ್ನು ಅಮಾನತುಗೊಳಿಸಿದ ಘಟನೆ ಗೋಕಾಕ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ.

      ಸವದತ್ತಿ ರಾಯಣ್ಣ ನಗರದ ತೆಂಗಿನಹಾಳ ಪ್ರಾಥಮಿಕ ಶಾಲೆ ಶಿಕ್ಷಕ ಪ್ರಕಾಶ ವೀರಭದ್ರಪ್ಪ ನಾಶಿಪುಡಿ ಅಮಾನತುಗೊಂಡವರು.  ಇವರನ್ನು ಗೋಕಾಕ ವಿಧಾನಸಭಾ ಕ್ಷೇತ್ರದ ಮತಗಟ್ಟೆಯೊಂದಕ್ಕೆ ಚುನಾವಣಾಧಿಕಾರಿಯಾಗಿ ನೇಮಿಸಲಾಗಿತ್ತು. ಬುಧವಾರ ಮಾಸ್ಟರಿಂಗ್ ಕೇಂದ್ರಕ್ಕೆ ಪ್ರಕಾಶ ಅವರು ಮದ್ಯಪಾನ ಮಾಡಿ ಬಂದಿದ್ದರು.  ಇದನ್ನು ಗಮನಿಸಿ ಆತನನ್ನು ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ನಡೆಸಲಾಯಿತು. ಈ ವೇಳೆ ಅಲ್ಲಿಂದ ಓಡಿ ಪರಾರಿಯಾಗಿದ್ದಾನೆ.

      ಈ ಹಿನ್ನೆಲೆಯಲ್ಲಿ ಚುನಾವಣೆ ಕರ್ತವ್ಯ ಲೋಪವೆಸಗಿದ ಆರೋಪದ ಹಿನ್ನೆಲೆಯಲ್ಲಿ ಗೋಕಾಕ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅದೇಶ ಹೊರಡಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link