ಈದ್ ಮಿಲಾದ್ : ನ.10 ರಂದು ರಾಜಧಾನಿಯಲ್ಲಿ ಮದ್ಯ ಮಾರಾಟ ಬಂದ್!!

ಬೆಂಗಳೂರು:

      ನ.10 ರಂದು ಭಾನುವಾರ ಎಲ್ಲಾ ರೀತಿಯ ಮದ್ಯ ಮಾರಾಟ ಮಾಡುವ ಅಂಗಡಿಗಳನ್ನು ಮುಚ್ಚುವಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ ರಾವ್ ಆದೇಶ ಹೊರಡಿಸಿದ್ದಾರೆ.

       ನಗರದಾದ್ಯಂತ ಮುಸ್ಲಿಮರು ಈದ್ ಮಿಲಾದ್ ಹಬ್ಬವನ್ನು ನ.10ರಂದು ಆಚರಿಸುವ ಪ್ರಯುಕ್ತ ಅಂದು ಮದ್ಯ ಮಾರಾಟ ನಿಷೇಧಿಸಲಾಗಿದೆ. ಈದ್ ಮಿಲಾದ್ ಹಬ್ಬವನ್ನು ಆಚರಿಸುವ ಪ್ರಯುಕ್ತ, ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ, ನಂತರ ಮೆರವಣಿಗೆ ಸಾಗಲಿದೆ.  ಈ ಮೆರವಣಿಗೆಯಲ್ಲಿ ಹೆಚ್ಚಿನ ಜನರು ಭಾಗವಹಿಸಲಿದ್ದು, ಮೆರವಣಿಗೆ ನಡೆಯುವ ಸಮಯದಲ್ಲಿ ಸಾರ್ವಜನಿಕ ಶಾಂತಿ, ಸುವ್ಯವಸ್ಥೆಗೆ ಭಂಗ ತರುವ ಸಾಧ್ಯತೆಯಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. 

     ಈ ಕಾರಣದಿಂದ ಅಂದು ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆವರೆಗೆ ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಬರುವ ಎಲ್ಲ ರೀತಿಯ ಬಾರ್‍ಗಳು, ವೈನ್ಸ್‍ಶಾಪ್‍ಗಳು, ಪಬ್‍ಗಳು ಹಾಗೂ ಎಲ್ಲ ರೀತಿಯ ಮದ್ಯ ಮಾರಾಟ ಮಾಡುವ ಅಂಗಡಿಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟವನ್ನು ಮಾಡದಿರಲು ನಿಷೇಧಾಜ್ಞೆ ವಿಧಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link