ಮೈಸೂರು :
ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಬಿಟ್ಟರೂ ನಾವು ಬಿಡಲ್ಲ, ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ವ್ಯಂಗ್ಯವಾಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ. ರವಿ, ಸಿದ್ದರಾಮಯ್ಯ ಅವರು ಮೈಸೂರಿನವರು ಅವರೇ ಅತಿಥಿ. ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಬಿಟ್ಟರೂ ನಾವು ಕೈ ಬಿಡಲ್ಲ. ಸಿದ್ದರಾಮಯ್ಯ ಅವರನ್ನು ಸೇರಿಸಿಕೊಂಡೇ ದಸರಾ ಮಾಡುತ್ತೇವೆ ಎಂದು ಲೇವಡಿ ಮಾಡಿದ್ದಾರೆ.
ಇದೇ ವೇಳೆ ಡಿಕೆಶಿ ಬಂಧನದ ಕುರಿತು ಪ್ರತಿಕ್ರಿಯೆ ನೀಡಿದ ಸಿ.ಟಿ. ರವಿ, ಭ್ರಷ್ಟಾಚಾರ ನಡೆಸದಿದ್ದರೆ ಭಯ ಯಾಕೆ, ಭ್ರಷ್ಟಾಚಾರ ಮಾಡಿರುತ್ತಾರೋ ಅವರಿಗೆ ಭಯ ಇರುತ್ತೆ. ಭ್ರಷ್ಟಾಚಾರದ ಬಗ್ಗೆ ತನಿಖೆ ಮಾಡೋದೆ ತಪ್ಪಾ? ಎಂದು ಪ್ರಶ್ನಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ