ಬೆಂಗಳೂರು:
ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಗ್ರಾಮ ವಾಸ್ತವ್ಯ ಮಾಡಲೇಬೇಕು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮೌಕಿಕ ಆದೇಶ ನೀಡಿದ್ದಾರೆ ಎಂದು ಮೂಲಗಳಿಂದ ಧೃಡ ಪಟ್ಟಿದೆ .
ಇಂದು ವಿಧಾನಸೌಧದಲ್ಲಿ ಕುಮಾರಸ್ವಾಮಿಯವರ ನೇತೃತ್ವದಲ್ಲಿ ನಡೆದ ಬರ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನೂರಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ತಾಂಡವವಾಡುತ್ತಿರುವ ಕಾರಣ ಅಲ್ಲಿನ ಪರಿಸ್ಥಿತಿ ಹಾಗೂ ಜನರ ಸಮಸ್ಯೆಗಳನ್ನು ಅರಿತುಕೊಳ್ಳಲು ಎಲ್ಲಾ ಜಿಲ್ಲಾಧಿಕಾರಿಗಳು ಗ್ರಾಮ ವಾಸ್ತವ್ಯ ನಡೆಸಲೇಬೇಕು ಎಂದು ತಿಳಿಸಿದ್ದಾರೆಂದು ತಿಳಿದು ಬಂದೆ.
ಈ ಮೊದಲು ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಡ್ಡಾಯವೇನು ಇರಲ್ಲಿಲ್ಲ ಆದರೆ ಬರದ ಕೂಗು ಮತ್ತು ರೈತರ ಜ್ವಲಂತ ಸಮಸ್ಯೆಗಳಾದ ಸಾಲ ಮನ್ನ ನೀರಾವರಿಯಲ್ಲಿನ ಲೋಪದೋಷ ,ಕರೆಂಟ್ ಇನ್ನೂ ಮುಂತಾದ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಇತ್ಯರ್ಥವಾಗುವುದಾದರೆ ಮಾಡುವ ಸಲುವಾಗಿ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎಂದು ಡಿಸಿಎಂ ಸ್ಪಷ್ಟಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
