ತುಮಕೂರು:
ಮಾಜಿ ಸಚಿವ, ಜೆಡಿಎಸ್‌ನ ಹಿರಿಯ ಮುಖಂಡ ಸಿ. ಚನ್ನಿಗಪ್ಪ(76) ಅವರು ಇಂದು ವಿಧಿವಶರಾಗಿದ್ದಾರೆ.
ಕಳೆದ ಹಲವಾರು ದಿನದಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದ ಸಲುವಾಗಿ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿತ್ತು, ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ ಎನ್ನಲಾಗಿದೆ.
ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಅರಣ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಚೆನ್ನಿಗಪ್ಪ, ತುಮಕೂರು ಜೆಡಿಎಸ್ ಜಿಲ್ಲಾಧ್ಯಕ್ಷರಾಗಿಯೂ ಪಕ್ಷದ ಪರವಾಗಿ ದುಡಿದಿದ್ದರು.
ಇನ್ನೂ ಮಾಜಿ ಸಚಿವ ಚನ್ನಿಗಪ್ಪ ಮೂರು ಜನ ಪುತ್ರರನ್ನು ಹೊಂದಿದ್ದು, ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಗೌರಿಶಂಕರ್, ಸೇರಿದಂತೆ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ವೇಣುಗೋಪಾಲ್ ಹಾಗೂ ಕುಮಾರ್ ಅಗಲಿದ್ದಾರೆ.
ಎಚ್ಡಿಕೆ ಸಂತಾಪ:
ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಸಿ. ಚೆನ್ನಿಗಪ್ಪ ಅವರ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.
ತುಮಕೂರು ಜಿಲ್ಲೆಯ ಪಕ್ಷದ ಜಿಲ್ಲಾಧ್ಯಕ್ಷರಾಗಿಯು ಕಾರ್ಯನಿರ್ವಹಿಸಿದ್ದ ಚೆನ್ನಿಗಪ್ಪ ಅವರು ಪಕ್ಷದ ಬೆಳವಣಿಗೆಯಲ್ಲಿ ಬಹುವಾಗಿ ಶ್ರಮಿಸಿದ್ದರು. ಅವರ ಕುಟುಂಬದವರಿಗೆ ಮತ್ತು ಅವರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲೆಂದು ಕೋರುತ್ತೇನೆ ಎಂದು ಎಚ್ಡಿಕೆ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ನೆಲಮಂಗಲ ತಾಲೂಕಿನ ಬೈರನಾಯಕನಹಳ್ಳಿಯಲ್ಲಿ ಅಂತ್ಯಕ್ರಿಯೆ ಸಾಧ್ಯತೆಯಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ