ಶಿವಮೊಗ್ಗ :
ಮಶೀನ್ ಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವ ಘಟನೆ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ.
30 ವರ್ಷದ ಚೇತನ್ ಸಾವನ್ನಪ್ಪಿದ ಕಾರ್ಮಿಕ. ರಾತ್ರಿ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದಾಗ ಮಶೀನ್ ನಲ್ಲಿ ಚೇತನ್ ಕೈ ಸಿಲುಕಿತ್ತು. ಹೀಗಾಗಿ ತೀವ್ರ ರಕ್ತಸ್ರಾವ ದಿಂದ ಬಳಲುತ್ತಿದ್ದ ಚೇತನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ