ಬೆಂಗಳೂರು :
ಸ್ಯಾಂಡಲ್ ವುಡ್ ಹಿರಿಯ ನಟ ಸಿದ್ದರಾಜ್ ಕಲ್ಯಾಣಕರ್ (60) ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಶ್ರೀಮಂಜುನಾಥ, ಸೂಪರ್, ಬುದ್ಧಿವಂತ ಸೇರಿದಂತೆ ಸುಮಾರು 70 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಸಿದ್ದರಾಜ್ ಕಲ್ಯಾಣಕರ್, ಅವರು ಯಾರೇ ನೀ ಅಭಿಮಾನಿ ಮೂಲಕ ಬೆಳ್ಳಿತೆರೆ ಪ್ರವೇಶಿಸಿದ್ದರು.
ನಿನ್ನೆಯಷ್ಟೇ 60 ನೇ ಜನ್ಮದಿನವನ್ನು ಪ್ರೇಮಲೋಕ ಧಾರವಾಹಿ ಸೆಟ್ ನಲ್ಲಿ ಆಚರಿಸಿಕೊಂಡಿದ್ದ ಅವರು, ತಡರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ಸಿದ್ದರಾಜ್ ಕಲ್ಯಾಣ್ಕರ್ ಅಂತ್ಯಕ್ರಿಯೆ ಜರುಗಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ