ಬೆಂಗಳೂರು:
ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೊರೋನಾ ಸೋಂಕಿನಿಂದ ಈಗ ಸಂಪೂರ್ಣ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಎರಡನೇ ಬಾರಿಗೆ ನಡೆದ ಕೊರೊನಾ ಪರೀಕ್ಷೆಯಲ್ಲೂ ನೆಗೆಟಿವ್ ವರದಿ ಬಂದಿರುವ ಹಿನ್ನೆಲೆ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಸಿದ್ದರಾಮಯ್ಯ ಅವರು ಮೂತ್ರದ ಸೋಂಕಿನ ಹಿನ್ನೆಲೆಯಲ್ಲಿ ಆಗಸ್ಟ್ 3ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿತ್ತು.
ಸದ್ಯ ಸಿದ್ದರಾಮಯ್ಯ ಕೊರೋನಾದಿಂದ ಗುಣಮುಖರಾಗಿದ್ದಾರೆ. ಎರಡನೇ ಬಾರಿಗೆ ಗಂಟಲು ದ್ರವ ಹಾಗೂ ರಕ್ತ ಪರೀಕ್ಷೆ ನಡೆಸಿದಾಗ ಕೊರೋನಾ ರಿಪೋರ್ಟ್ ನೆಗಿಟಿವ್ ಬಂದಿದೆ. ಹೀಗಾಗಿ ಸಿದ್ದರಾಮಯ್ಯ ಮನೆಗೆ ಹೋಗಬಹುದು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಕಳೆದ 10 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ವೈದ್ಯರು, ಸಿಬ್ಬಂದಿಗೆ ಸಿದ್ದರಾಮಯ್ಯ ಕೃತಜ್ಞತೆ ಸಲ್ಲಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
