ಶಿವಮೊಗ್ಗ:
ವಿದ್ಯುತ್ ತಂತಿ ತಗುಲಿ ರೈತನೋರ್ವ ಸಾವನ್ನಪ್ಪಿದ ಘಟನೆ ಶಿಕಾರಿಪುರ ತಾಲೂಕಿನ ಚಿಕ್ಕಮಾಗಡಿ ಗ್ರಾಮದಲ್ಲಿ ಇಂದು ಮುಂಜಾನೆ ನಡೆದಿದೆ.
ಜಿಲ್ಲಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದ ಅನಾಹುತಗಳು ಸಂಭವಿಸುತ್ತಿದ್ದು, ಇಂದು ಮುಂಜಾನೆ ಚಿಕ್ಕಮಾಗಡಿ ಗ್ರಾಮದ ರೈತ ಲೇಕಪ್ಪ (45) ತಮ್ಮ ಜಮೀನಿಗೆ ಹೋಗಿದ್ದ ಸಂದರ್ಭ ಈ ದುರ್ಘಟನೆ ನಡೆದಿದೆ.
ವಿದ್ಯುತ್ ಕಂಬದ ಮುಖ್ಯ ತಂತಿ ತುಂಡಾಗಿ ನೆಲಕ್ಕೆ ಬಿದ್ದಿದ್ದು, ಜಮೀನಿನಲ್ಲಿ ನೀರು ತುಂಬಿದ್ದರಿಂದ ಲೇಕಪ್ಪ ಅವರಿಗೆ ತಂತಿ ಕಂಡಿಲ್ಲ. ಈ ಸಂದರ್ಭ ವಿದ್ಯುತ್ ತಂತಿ ತುಳಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ತಹಶೀಲ್ದಾರ್ ಎಂ.ಪಿ ಕವಿರಾಜ್ ಹಾಗೂ ಗ್ರಾಮ ಲೆಕ್ಕಿಗ ನಾಗರಾಜ್ ನಾಯ್ಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
