ಹಾವೇರಿ :

ವಿದ್ಯುತ್ ಸ್ಪರ್ಶಿಸಿ ರೈತನೋರ್ವ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಮಲಗುಂದ ಗ್ರಾಮದಲ್ಲಿ ನಡೆದಿದೆ.
41 ವರ್ಷದ ನಾಗಪ್ಪ ಹೊಂಕಣ ಮೃತ ದುರ್ದೈವಿ. ತಮ್ಮ ಜಮೀನಿನಲ್ಲಿದ್ದ ಬೋರ್ ವೆಲ್ ಆರಂಭಿಸಲು ತೆರಳಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








