ಬೆಂಗಳೂರು :
ಸಾಲಮನ್ನಾ, ಕಬ್ಬಿಗೆ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ರೈತರು ಸೋಮವಾರ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧಕ್ಕೆ ರೈತರು ಮುತ್ತಿಗೆ ಹಾಕುವ ಸಾಧ್ಯತೆ ಹಿನ್ನೆಲೆಯಲ್ಲಿ ಶಕ್ತಿ ಸೌಧ ವಿಧಾನಸೌಧಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಸುಮಾರು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ರೈತರೆಲ್ಲರೂ ಫ್ರೀಡಂ ಪಾರ್ಕಿಗೆ ಬರಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಈಗಾಗಲೇ ಫ್ರೀಡಂ ಪಾರ್ಕ್ನಲ್ಲಿ ಒಂದು ಸಾವಿರ ಪೊಲೀಸರನ್ನು ನಿಯೋಜಿಸುವ ಮೂಲಕ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಒಂದೆಡೆ ಫ್ರೀಡಂ ಪಾರ್ಕ್ನಿಂದ ವಿಧಾನಸೌಧಕ್ಕೆ ತೆರಳಬೇಕೆಂದು ರೈತರು ಯೋಜಿಸಿದ್ದರೆ ಮತ್ತೊಂದೆಡೆ ರೈತರನ್ನು ಫ್ರೀಡಂ ಪಾರ್ಕ್ನಲ್ಲಿಯೇ ತಡೆ ಹಿಡಿಯಲು ಪೊಲೀಸರು ಎಲ್ಲ ವ್ಯವಸ್ಥೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಸಾವಿರಾರು ರೈತರು ಮೆಜೆಸ್ಟಿಕ್ಗೆ ಬಂದಿಳಿದಿದ್ದು ಶಿವಮೊಗ್ಗ, ಮೈಸೂರು, ಬೆಳಗಾವಿ, ಕೊಪ್ಪಳ, ಸಾಗರ, ಚನ್ನಪಟ್ಟಣ, ಮಂಡ್ಯ, ಬೆಳಗಾವಿ ಮತ್ತು ರಾಜ್ಯದ ಇನ್ನಿತರ ಜಿಲ್ಲೆಗಳಿಂದ ಮತ್ತಷ್ಟು ರೈತರು ಸೇರ್ಪಡೆಗೊಳ್ಳಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ