ಬೆಂಗಳೂರು:
ಕಬ್ಬಿನ ಬಾಕಿ ಮೊತ್ತ ಬಿಡುಗಡೆ ಮಾಡುವ ವಿಚಾರದಲ್ಲಿ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ.
ಬೆಂಬಲ ಬೆಲೆ ನಿಗದಿ, ಸಾಲ ಮನ್ನಾ, ಕಬ್ಬು ಬಾಕಿ ಹಣ ಪಾವತಿ ಇನ್ನಿತರೆ ವಿಚಾರ ಕುರಿತು ರೈತರು ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಷರತ್ತು ಮೇರೆಗೆ ಹಿಂಪಡೆದಿದ್ದು, ಸರ್ಕಾರಕ್ಕೆ ಈ ವಿಚಾರ ಕುರಿತು ಒಂದು ನಿರ್ದಿಷ್ಟ ನಿರ್ಧಾರ ಕೈಗೊಳ್ಳಲು 15 ದಿನಗಳ ಗಡುವು ನೀಡು ಪ್ರತಿಭಟನೆ ಹಿಂಪಡೆದಿದ್ದಾರೆ. ಒಂದು ವೇಳೆ ಭರವಸೆ ಈಡೇರದಿದ್ದರೆ, ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆಯನ್ನೂ ನೀಡಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಇಂದು(ನವೆಂಬರ್ 19) ರೈತರು ಬೆಂಗಳೂರಿನ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು.
ಕಬ್ಬಿಗೆ ನ್ಯಾಯೋಚಿತವಾದ ಬೆಲೆ ನಿಗದಿ ಮಾಡಬೇಕು, ಸಕ್ಕರೆ ಕಾರ್ಖಾನೆಗಳಿಗೆ ಪೂರೈಸಿದ ಕಬ್ಬಿನ ಹಣ ಬಾಕಿ ಪಾವತಿ ಮಾಡಬೇಕು ಹಾಗೂ ಕೂಡಲೇ ಭತ್ತ ಖರೀದಿ ಕೇಂದ್ರಗಳನ್ನು ತೆರೆಯಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ