ತುಮಕೂರು:
ರೈಲಿಗೆ ಸಿಲುಕಿ ತಂದೆ ಹಾಗೂ ಮಗ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ತಡರಾತ್ರಿ ನಗರದ ಕ್ಯಾತಸಂದ್ರ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.
ಮೃತರನ್ನು 30 ವರ್ಷದ ಯೋಗೇಶ್ ಹಾಗೂ ಅವರ 8 ವರ್ಷದ ಪುತ್ರ ಚಿರಂಜೀವಿ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ-ಬೆಂಗಳೂರು ಪ್ಯಾಸೆಂಜರ್ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಮೃತರು ಹಾಸನದ ವಲ್ಲಭಾಯಿ ನಗರದವರೆಂದು ತಿಳಿದುಬಂದಿದೆ.
ಆತ್ಮಹತ್ಯೆಯೋ ಅಥವಾ ಆಕಸ್ಮಿಕ ಸಾವೋ ಎಂಬುದು ತಿಳಿದು ಬಂದಿಲ್ಲ. ಈ ಸಂಬಂಧ ರೈಲ್ವೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ