ಮಗನನ್ನು SSLC ಪರೀಕ್ಷೆಗೆ ಕರೆದುಕೊಂಡು ಹೋಗುವ ವೇಳೆ ತಂದೆ ಸಾವು!!

ರಾಯಚೂರು: 

      ಮಗನನ್ನು ಪರೀಕ್ಷೆಗೆ ಕರೆದುಕೊಂಡು ಹೋಗುತ್ತಿದ್ದ ಶಿಕ್ಷಕ ಬೈಕ್ ನಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಗಬ್ಬೂರ ಗ್ರಾಮದ ಬಳಿ ನಡೆದಿದೆ.

       ರಾಜ್ಯಾದ್ಯಂತ ಇಂದಿನಿಂದ ಎಸ್‌ಎಸ್‌ಎಲ್ಸಿ ಪರೀಕ್ಷೆ ಆರಂಭವಾಗಿದ್ದು, ಮಗನನ್ನು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲೆಂದು ಬೈಕ್‌ನಲ್ಲಿ ಕರೆದುಕೊಂಡು ಹೋಗುವ ವೇಳೆ ಆಕಳು ಅಡ್ಡ ಬಂದ ಪರಿಣಾಮ ಬೈಕ್​ ಸ್ಕಿಡ್​ ಆಗಿದೆ. ಕೆಳಗೆ ಬಿದ್ದ ನಾಗಾರೆಡ್ಡಿ(53) ತಲೆಗೆ ಗಂಭೀರ ಗಾಯವಾಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

      ಘಟನೆಯಲ್ಲಿ ವಿದ್ಯಾರ್ಥಿ ಕೂಡ ಗಾಯಗೊಂಡಿದ್ದಾನೆ. ಮೃತ ನಾಗಾರೆಡ್ಡಿ ಸುಕೇಶ್ವರಹಾಳ ಗ್ರಾಮದ ಶಾಲೆಯಲ್ಲಿ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ದೇವದುರ್ಗ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link