ಬೆಂಗಳೂರು :
ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಮುಂದೂಡಲಾಗಿದ್ದ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ)ದ ಎಫ್‌ಡಿಎ ಪರೀಕ್ಷೆಯ ಮರು ದಿನಾಂಕ ಪ್ರಕಟವಾಗಿದೆ.
ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಜಿ.ಸತ್ಯವತಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ದಿನಾಂಕ 31-01-2020ರ ಅಧಿಸೂಚನೆಗಳಲ್ಲಿ ಅಧಿಸೂಚಿಸಲಾಗಿದ್ದ ಸಹಾಯಕ/ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 24-01-2021ರಂದು ನಡೆಯಬೇಕಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿರುತ್ತದೆ. ಪ್ರಸ್ತುತ ಮುಂದೂಡಲಾದ ಎಫ್ ಡಿ ಎ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ದಿನಾಂಕ 28-02-2021ರಂದು ನಡೆಸಲು ಆಯೋಗವು ತೀರ್ಮಾನಿಸಿದೆ ಎಂದು ತಿಳಿಸಿದ್ದಾರೆ.
ರಾಜ್ಯದಾದ್ಯಂತ ಜನವರಿ 24 ನಡೆಯಬೇಕಿದ್ದ ಎಫ್‌ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಸಂಗತಿಯನ್ನು ಸಿಸಿಬಿ ಪೊಲೀಸರು ಪತ್ತೆ ಮಾಡಿದ್ದರು. ಈ ಸಂಬಂಧ ಹಲವರನ್ನು ಸಿಸಿಬಿ ಬಂಧಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
