ಮಡಿಕೇರಿ :
‘ಕೊಡವರು ಗೋ ಮಾಂಸ ತಿನ್ನುತ್ತಾರೆ’ ಎಂದು ಇತ್ತೀಚಿಗೆ ಹೇಳಿಕೆ ನೀಡಿದ್ದ ಮಾಜಿ ಸಿಎಂ ಮತ್ತು ಹಾಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ FIR ದಾಖಲಾಗಿದೆ.
ಇತ್ತೀಚೆಗೆ ‘ಮುಸ್ಲಿಮರು ಮಾತ್ರ ಗೋಮಾಂಸ ತಿನ್ನಲ್ಲ. ದಲಿತರು ತಿಂತಾರೆ, ಕ್ರಿಶ್ಚಿಯನ್ನರು ತಿಂತಾರೆ, ಕೊಡವರು ಕೂಡ ಗೋಮಾಂಸ ತಿಂತಾರೆ, ಎಲ್ರೂ ತಿಂತಾರೆ. ನಂಗೂ ತಿನ್ನಬೇಕು ಅನಿಸಿದ್ರೆ ತಿಂತೀನಿ. ಯಾರು ಏನು ತಿನ್ನಬೇಕು ಅನ್ನೋದು ಅವರವರ ಇಚ್ಛೆಗೆ ಬಿಟ್ಟಿದ್ದು. ಇದನ್ನ ಕೇಳೋ ಅಧಿಕಾರ ಯಾರಿಗೂ ಇಲ್ಲ’ ಅಂತ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು.
ಇದರಿಂದಾಗಿ ಕೊಡವರ ಭಾವನೆಗೆ ಧಕ್ಕೆಯಾಗಿದೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ವ್ಯಕ್ತಿಯೊಬ್ಬರು ದೂರು ನೀಡಿದ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇದೀಗ ಎಫ್ ಐ ಆರ್ ದಾಖಲಾಗಿದೆ.
ಈ ಕುರಿತಂತೆ ಪ್ರತಿಕ್ರಿಯಿಸಿರುವ ಪಶ್ಚಿಮ ಘಟ್ಟ ಸಂರಕ್ಷಣಾ ಸಮಿತಿ ಅಧ್ಯಕ್ಷ ರವಿ ಕುಶಾಲಪ್ಪ, ಸಿದ್ದರಾಮಯ್ಯ ಹೇಳಿಕೆಯಿಂದ ಕೊಡವರ ಭಾವನೆಗೆ ಧಕ್ಕೆಯಾಗಿದೆ. ಸಿದ್ದರಾಮಯ್ಯ ಅವರು ಬಹಿರಂಗ ಕ್ಷಮೆ ಕೇಳಿದ್ರೂ ನಾವು ಕ್ಷಮಿಸೋದಿಲ್ಲ. ಕಾನೂನು ಹೋರಾಟ ಮುಂದುವರೆಸುವುದಾಗಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ