ಬೆಂಗಳೂರು :
ಕಳೆದ ನಿನ್ನೆ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವಂತ ಸಿಎಂ ರಾಜಕೀಯ ಕಾರ್ಯದರ್ಶಿ ಎನ್ ಆರ್ ಸಂತೋಷ್ ವಿರುದ್ಧ, ಆತ್ಮಹತ್ಯೆ ಯತ್ನ ಪ್ರಕರಣದ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.
ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಕೂಡಲೇ ಕುಟುಂಬಸ್ಥರು ಅವರನ್ನು ನಗರ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದರು.
ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತೋಷ್, ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ನಿನ್ನೆ ರಾತ್ರಿಯೇ ಆಸ್ಪತ್ರೆಗೆ ಭೇಟಿ ನೀಡಿ ಸಂತೋಷ್ ಆರೋಗ್ಯ ವಿಚಾರಿಸಿದ್ದಾರೆ.
ಸಂತೋಷ್ ದಾಖಲಾಗಿದ್ದಂತ ಆಸ್ಪತ್ರೆಗೆ ಭೇಟಿ ನೀಡಿದ ಸದಾಶಿವನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಮಂಜುನಾಥ್, ಅವರ ಆತ್ಮಹತ್ಯೆಗೆ ಯತ್ನಿಸಿದ ಸಂಬಂಧ ತನಿಖೆ ನಡೆಸಲು, ದೂರು ದಾಖಲಿಸಿಕೊಂಡಿದ್ದಾರೆ. ಅಲ್ಲದೇ ಆತ್ಮಹತ್ಯೆ ಯತ್ನ ಪ್ರಕರಣದ ಅಡಿಯಲ್ಲಿ ಅವರ ವಿರುದ್ಧವೂ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ