ಬೆಂಗಳೂರು :
ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಬಿಬಿಎಂಪಿ ಅಧಿಕಾರಿ ನೀಡಿದ ದೂರಿನನ್ವಯ ಸಚಿವರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.
ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿ ಮುತ್ತುರಾಜ್ ದೂರು ನೀಡಿದ್ದಾರೆ. ಅನಧಿಕೃತ ಜಾಹೀರಾತು ಫಲಕಗಳನ್ನು ಹೈಕೋರ್ಟ್ ನಿಷೇಧಿಸಿದ್ದರೂ ಸಚಿವ ಡಿ.ಕೆ. ಶಿವಕುಮಾರ್ ಮಾಲೀಕತ್ವದ ಜಮೀನುಗಳಲ್ಲಿ ಜಾಹೀರಾತುಗಳನ್ನು ಹಾಕಲಾಗಿದೆ.
ಅನಧಿಕೃತ ಜಾಹೀರಾತು ಫಲಕಗಳನ್ನು ಹೈಕೋರ್ಟ್ ನಿಷೇಧಿಸಿರುವ ಹಿನ್ನೆಲೆಯಲ್ಲಿ ಮೈಸೂರು ರಸ್ತೆಯಲ್ಲಿರುವ ಪಂತರಪಾಳ್ಯದಲ್ಲಿದ್ದ ಡಿಕೆಶಿ ಮಾಲೀಕತ್ವದ ಜಮೀನಿನಲ್ಲಿ ಇದ್ದ ಅನಧಿಕೃತ ಜಾಹೀರಾತುಗಳನ್ನು ತೆರವುಗೊಳಿಸುವಂತೆ ಬಿಬಿಎಂಪಿ ಡಿಕೆಶಿಗೆ ಮನವಿ ನೀಡಿತ್ತು. ಆದರೆ ಸಚಿವರು ಜಾಹೀರಾತು ಫಲಕಗಳನ್ನು ತೆಗೆಯದೇ ಹಾಗೇ ಬಿಟ್ಟಿದ್ದಾರೆ.
ಈ ಹಿನ್ನೆಲೆಯಲ್ಲಿ ಅಧಿಕಾರಿ ಮುತ್ತುರಾಜ್ ಅವರು ಶಿವಕುಮಾರ್ ಮತ್ತು ಇತರರ ವಿರುದ್ಧ ಬ್ಯಾಟರಾಯನಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
