ತುಮಕೂರು:
ಆಕಸ್ಮಿಕ ಬೆಂಕಿ ತಗುಲಿ ನಗರದ ಹೊರವಲಯದ ಕೈಗಾರಿಕಾ ಅಭಿವೃದ್ಧಿ ಪ್ರದೇಶದಲ್ಲಿರುವ ಬೇಳೂರು ಬಾಯರ್ ಬಯೋಟೆಕ್ ಫ್ಯಾಕ್ಟರಿಗೆ ಅಪಾರ ನಷ್ಟ ಸಂಭವಿಸಿದೆ.
ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದ್ದು, ಘಟನೆ ವೇಳೆ ಸ್ಫೋಟ ಸಂಭವಿಸಿ ಕಬ್ಬಿಣದ ತುಂಡುಗಳು ಸುತ್ತಮುತ್ತಲಿನ ಜನವಸತಿ ಪ್ರದೇಶಗಳಿಗೆ ಬಂದು ಬಿದ್ದಿದೆ. ಇದರಿಂದ ಸಾರ್ವಜನಿಕರು ಗಾಬರಿಗೊಂಡು ಫ್ಯಾಕ್ಟರಿ ಎದುರು ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಅವಘಡಕ್ಕೆ ಸೂಕ್ತ ಕಾರಣ ತಿಳಿದುಬಂದಿಲ್ಲ. ಬೆಂಕಿ ಅವಘಡದಿಂದ ಫ್ಯಾಕ್ಟರಿ ಸುಟ್ಟಿದ್ದು, ಭಾರಿ ನಷ್ಟ ಸಂಭವಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ