ಸಿಟಿ ಸೆಂಟರ್ ಮಾಲ್ ನಲ್ಲಿ ಅಗ್ನಿ ದುರಂತ..!!

ಮಂಗಳೂರು: 

         ನಗರದ ಹೃದಯ ಭಾಗದಲ್ಲಿರುವ ಮಾಲ್  ವೊಂದರಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದೆ .ಸದ್ಯಕ್ಕೆ ಯಾವುದೇ ಸಾವು ನೋವು ಸಂಭವಿಸಿಲ್ಲ  ಎಂದು ವರದಿಯಾಗಿದೆ. 

        ಶಾರ್ಟ್ ಸರ್ಕ್ಯೂಟ್‌ನಿಂದ ಮಂಗಳೂರಿನ ಪ್ರಸಿದ್ಧ ಸಿಟಿ ಸೆಂಟರ್ ಮಾಲ್‍ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಸ್ಥಳದಲ್ಲಿ ಉಸಿರು ಗಟ್ಟಿಸುವ ವಾತಾವರಣ ನಿರ್ಮಾಣವಾಗಿತ್ತು.

        ಸಿಟಿ ಸೆಂಟರ್ ಮಾಲ್‍ನ ನಾಲ್ಕನೇ ಮಹಡಿಯ  ಫುಡ್ ಕೋರ್ಟಿನಲ್ಲಿ ಶಾರ್ಟ್ ಸರ್ಕ್ಯೂಟ್‌ ಆಗಿ ಈ ಅಗ್ನಿ ಅನಾಹುತವಾಗಿದ್ದು , ಮಾಲ್ ತುಂಬೆಲ್ಲ ಹೊಗೆ ಆವರಿಸಿಕೊಂಡ ಪರಿಣಾಮ ಉಸಿರುಗಟ್ಟುವ ವಾತಾವರಣ ನಿರ್ಮಾಣವಾಗಿತ್ತು.

       ಅಗ್ನಿ ಅವಘಡ ಸಂಭವಿಸಿದ ಕೂಡಲೇ ಮಾಲ್‍ನಲ್ಲಿ ಕರ್ತವ್ಯ ಸಲ್ಲಿಸುತ್ತಿದ್ದ ಸಾವಿರಾರು ಸಿಬ್ಬಂದಿಯನ್ನು ಹಾಗೂ ಜನರನ್ನು ಪೊಲೀಸರು ಹೊರಕ್ಕೆ ಕಳುಹಿಸಿದರು. ಸ್ಥಳಕ್ಕೆ 3 ಅಗ್ನಿಶಾಮಕ ದಳದ ವಾಹನ ಆಗಮಿಸಿ ಬೆಂಕಿ ನಂದಿಸಿವೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ