ಬಂಟ್ವಾಳ :
ಕೋಳಿ ಫೀಡ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.
ಬಂಟ್ವಾಳದ ಮಾರ್ನಬೈಲು ಎಂಬಲ್ಲಿ ಈ ಘಟನೆ ನಡೆದಿದ್ದು, ಕೋಳಿ ಆಹಾರ ಪೂರೈಕೆ ಮಾಡುವ ಮಿನಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಮಿನಿ ಲಾರಿಗೆ ಬೆಂಕಿ ಹತ್ತಿಕೊಂಡು ಭಾಗಶ ಭಸ್ಮವಾಗಿದೆ.
ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಗೆ ಗಂಭೀರ ಗಾಯಗಳಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/04/Fire-1.gif)