ಚಿತ್ರದುರ್ಗ : ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ವೋಲ್ವೋ ಬಸ್!!!

ಚಿತ್ರದುರ್ಗ:

     ಚಲಿಸುತ್ತಿದ್ದ ವೋಲ್ವೋ ಬಸ್ಸಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಜಿಲ್ಲೆಯ ಗಿಡ್ಡೋಬನಹಳ್ಳಿ ಬಳಿಯ ರಾಷ್ಟ್ರೀಯ ಹೆ‌ದ್ದಾರಿ 4ರಲ್ಲಿ ನಡೆದಿದೆ.

     ಬೆಳಗಾವಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ವೋಲ್ವೋ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ರಸ್ತೆ ಮಧ್ಯೆ ಧಗಧಗನೆ ಹೊತ್ತಿ ಉರಿದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಪ್ರಯಾಣಿಕರು ಬಸ್ ನಿಂದ ಕೆಳಗಿಳಿದಿದ್ದಾರೆ. ಅದೃಷ್ಟವಶಾತ್ ಬಸ್ ನಲ್ಲಿದ್ದ 30 ಮಂದಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

     ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

      ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap