ಬೆಂಗಳೂರು :
ನಿರ್ಮಾಣ ಹಂತದ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಆರ್ಆರ್ ನಗರದ ರಾಜರಾಜೇಶ್ವರಿ ದೇವಾಲಯದ ಬಳಿ ನಡೆದಿದೆ.
ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಪ್ಲೈವುಡ್ ಶೀಟ್ಗಳು, ಒಣಗಿದ ಬಿಳಿ ಹುಲ್ಲು, ಕಟ್ಟಡ ನಿರ್ಮಾಣಕ್ಕೆ ಇಟ್ಟಿದ ವಸ್ತುಗಳಿಗ ಬೆಂಕಿ ತಲುಗಿ ವಸ್ತುಗಳು ಸುಟ್ಟು ಕರಕಲಾಗಿವೆ. ಅಲ್ಲದೇ ಕಟ್ಟಡದ ಪಕ್ಕದ ದೇವಾಲಯದ ಗೋಡಾನ್ನಲ್ಲಿದ್ದ ಆಯುರ್ವೇದಿಕ್ ವಸ್ತುಗಳು ಕೂಡ ಸುಟ್ಟು ಕರಕಲಾಗಿವೆ.
ವಿಷಯ ತಿಳಿದು ಘಟನಾ ಸ್ಥಳಕ್ಕೆ ಆರ್ ಆರ್ ನಗರ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶ್ವಸಿಯಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ