ರಾಮನಗರ:
ಶಾರ್ಟ್ ಸರ್ಕ್ಯೂಟ್ ನಿಂದ ಆಯಿಲ್ ಅಂಗಡಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಅಂಗಡಿಯಲ್ಲಿ ಸುಮಾರು 50 ಲಕ್ಷ ರೂಪಾಯಿ ಮೌಲ್ಯ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ನಗರದ ಹನುಮಂತ ನಗರ ಬಡಾವಣೆಯಲ್ಲಿ ನಿನ್ನೆ ತಡ ರಾತ್ರಿ ನಡೆದಿದೆ.
ರಾಮನಗರ ಜಾಲಮಂಗಲ ರಸ್ತೆಯಲ್ಲಿರುವ ಹನುಮಂತ ನಗರದಲ್ಲಿ ಶಿವಣ್ಣ ಎಂಬುವರಿಗೆ ಸೇರಿದ ಕಟ್ಟಡದಲ್ಲಿ ಇದ್ದ ಆಯಿಲ್ ಅಂಗಡಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿ ಶಾಮಕ ಸಿಬ್ಬಂದಿ ಸತತ ನಾಲ್ಕು ಗಂಟೆಗೂ ಹೆಚ್ಚು ಕಾಲ ಕಾರ್ಯಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶ್ವಸಿಯಾದರು. ಬೆಂಕಿಗೆ ಆಹುತಿಯಾದ ಅಂಗಡಿ ಜನವಸತಿ ಪ್ರದೇಶದಲ್ಲಿದ್ದ ಕಾರಣ ಆತಂಕಕ್ಕೆ ಕಾರಣವಾಗಿತ್ತು.
ಬೆಂಕಿಯಲ್ಲಿ ಅಂದಾಜು 50ಲಕ್ಷ ರೂ. ಮೌಲ್ಯದ ಆಯಿಲ್ ಸಾಮಾಗ್ರಿಗಳು ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಭಸ್ಮವಾಗಿದೆ.
ಅಂಗಡಿಯಲ್ಲಿ ಪೆಟ್ರೋಲಿಯಂಗೆ ಸಂಬಂಧಿಸಿದ ವಸ್ತುಗಳು ಇದ್ದ ಕಾರಣ ಬೆಂಕಿ ಬೇಗ ಹೊತ್ತಿಕೊಂಡಿತ್ತು. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಬೆಂಕಿ ದುರಂತ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಐಜೂರು ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ