ಬೆಂಗಳೂರು :
ಸೀಲ್ ಡೌನ್ ಪ್ರದೇಶಗಳಲ್ಲಿ ಅನಗತ್ಯವಾಗಿ ಓಡಾಟ ಮಾಡುವವರ ಮೇಲೆ ಕಠಿಣ ಕ್ರಮಕೈಗೊಳ್ಳುವಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಸಿಲಿಕಾನ್ ಸಿಟಿಯಲ್ಲಿ ಹೆಚ್ಚು ಕೊರೊನಾ ಪ್ರಕರಣಗಳು ಕಂಡು ಬಂದಿರುವ 5 ಪ್ರದೇಶಗಳನ್ನು ಸೀಲ್ಡೌನ್ ಮಾಡಲಾಗಿದೆ.
ಮುಂಜಾನೆಯಿಂದಲೇ ಆಯಾ ಪ್ರದೇಶದ ಪೊಲೀಸ್ ಠಾಣೆಯ ಸಿಬ್ಬಂದಿ ಬ್ಯಾರಿಕೇಡ್ ಅಳವಡಿಕೆ ಮಾಡಿ ಅನಗತ್ಯ ಓಡಾಟ ಮಾಡುವವರ ಮೇಲೆ ಕಣ್ಣಿಟ್ಟಿದ್ದಾರೆ. ಸೀಲ್ಡೌನ್ ಪ್ರದೇಶಗಳಲ್ಲಿ ಅನಗತ್ಯ ಓಡಾಟ ಮಾಡುವವರ ಮೇಲೆ ಕ್ರಮ ಕೈಗೊಳ್ಳುವಂತೆ ನಿನ್ನೆ ನಡೆದ ಸಭೆಯಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರಿಗೆ ಸೂಚನೆ ನೀಡಿದ್ದರು.
ಬೆಂಗಳೂರಿನ ಸಿದ್ದಾಪುರ, ವಿ.ವಿ.ಪುರಂ, ಚಿಕ್ಕಪೇಟೆ, ಕೆ.ಆರ್ ಮಾರುಕಟ್ಟೆ, ಕಲಾಸಿಪಾಳ್ಯ ಈ ಪ್ರದೇಶಗಳಲ್ಲಿ ಮಾಸ್ಕ್ ಹಾಕದೇ ವಿನಾಕಾರಣ ಓಡಾಟ ಮಾಡಿದರೆ ಅಂತಹವರ ವಿರುದ್ಧ ಸಂಬಂಧಪಟ್ಟ ಠಾಣೆಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲು ನಿರ್ಧರಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ