ಚಿಕ್ಕಬಳ್ಳಾಪುರ:
ಜಿಲ್ಲೆಯ ಗೌರಿಬಿದನೂರಿನಲ್ಲಿ ಹೊಸದಾಗಿ 5 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ಸ್ಪಷ್ಟಪಡಿಸಿದ್ದಾರೆ.
ಈ ಮೊದಲು 4 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅದರಲ್ಲಿ ಒಬ್ಬರೂ ಸಾವನ್ನಪ್ಪಿದ್ದರು. ಮೆಕ್ಕಾ ಪ್ರವಾಸ ಕೈಗೊಂಡು ವಾಪಸ್ ಆಗಿದ್ದ 70 ವರ್ಷದ ವೃದ್ಧೆಯೊಬ್ಬರು ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯಲ್ಲಿ ಮಾರ್ಚ್ 25ರಂದು ಮೃತಪಟ್ಟಿದ್ದರು. ಇದೀಗ ಹೊಸದಾಗಿ 5 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ. ಅದರಲ್ಲಿ ಮೃತಪಟ್ಟ ಮಹಿಳೆಯ ಕುಟುಂಬದವರೂ ಸೇರಿದ್ದಾರೆ.
ಮೃತ ಮಹಿಳೆಯ ಮಗ ಹಾಗೂ ಸೊಸೆ, ಅವರ ಮೊಮ್ಮಗ ಸೇರಿದಂತೆ ಸೊಸೆಯ ತಮ್ಮನಿಗೂ ಕೊರೊನಾ ಸೋಂಕು ಪಾಸಿಟಿವ್ ಬಂದಿದೆ. ಹೀಗಾಗಿ ಈ ಮೊದಲ 4 ಪ್ರಕರಣಗಳ ಜೊತೆಗೆ ಇಂದು ಹೊಸದಾಗಿ 5 ಪ್ರಕರಣಗಳು ಸೇರಿ ಒಟ್ಟು 09 ಪಾಸಿಟಿವ್ ಪ್ರಕರಣಗಳಾಗಿವೆ. ಅವರ ರಕ್ತ ಹಾಗೂ ಗಂಟಲ ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿದ್ದು, ಅಂತಿಮ ವರದಿಗಾಗಿ ಕಾಯುತ್ತಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ.
ಸೋಂಕು ದೃಢಪಟ್ಟಿರುವ ಮಂದಿಯನ್ನು ಚಿಕ್ಕಬಳ್ಳಾಪುರ ನಗರದ ಹಳೇ ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ