ತಿರುವನಂತಪುರಂ:
ಕೇರಳದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕಾರು ಅಡ್ಡಗಟ್ಟಿ ಕಪ್ಪು ಬಾವುಟ ಪ್ರದರ್ಶಿಸಲು ಯತ್ನಿಸಿದ ಆರೋಪದ ಮೇಲೆ ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ ಮತ್ತು ಕಾಂಗ್ರೆಸ್‌ನ ಐವರು ಕಾರ್ಯಕರ್ತರ ಬಂಧನವಾಗಿದೆ.
ಸಿಪಿಐನ ಭಾರತೀಯ ವಿದ್ಯಾರ್ಥಿ ಫೆಡರೇಶನ್‌ನ (ಎಸ್‌ಎಫ್‌ಐ) ಮೂವರು ಮತ್ತು ಯುವ ಕಾಂಗ್ರೆಸ್‌ನ ಇಬ್ಬರನ್ನು ಬಂಧಿಸಿರುವ ಪೊಲೀಸರು, 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಸೋಮವಾರ(ಡಿ.23) ರಾತ್ರಿ ಕೇರಳದ ತಿರುವನಂತಪುರಂ ಪ್ರವೇಶಿಸುತ್ತಿದ್ದಂತೆ ಸಿಎಂ ಯಡಿಯೂರಪ್ಪನವರ ಕಾರಿಗೆ ಅಡ್ಡ ಹಾಕಿದ್ದ ಅಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆಗೆ ಮುಂದಾಗಿದ್ದರು. ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಮತ್ತು ಕೇರಳದ ಪತ್ರಕರ್ತರನ್ನು ಪೊಲೀಸ್ ವಶಕ್ಕೆ ಪಡೆದಿದ್ದನ್ನು ಖಂಡಿಸಿ ಸಿಎಂ ಕಾರಿಗೆ ಅಡ್ಡ ಹಾಕಿದ್ದರು. ಗೋ ಬ್ಯಾಕ್ ಯಡಿಯೂರಪ್ಪ ಎಂದು ಘೋಷಣೆ ಕೂಗುತ್ತಿದ್ದ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಯಡಿಯೂರಪ್ಪನವರಿಗೆ ಮುಂದೆ ಸಾಗಲು ಅನುವು ಮಾಡಿಕೊಟ್ಟಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ