ಬೆಂಗಳೂರು :
ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ 15 ನೂತನ ಶಾಸಕರ ಪ್ರಮಾಣವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ ಆಗಿದೆ.
ಉಪಚುನಾವಣೆಯಲ್ಲಿ ಗೆದ್ದ 12 ಬಿಜೆಪಿ ಶಾಸಕರು, 2 ಕಾಂಗ್ರೆಸ್ ಶಾಸಕರು ಹಾಗೂ ಓರ್ವ ಪಕ್ಷೇತರ ಶಾಸಕ ವಿಧಾನಸೌಧದಲ್ಲಿ ಡಿಸೆಂಬರ್ 22 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದು, ಈಗಾಗಲೇ ಪ್ರಮಾಣ ವಚನ ಸ್ವೀಕಾರಕ್ಕೆ ತಯಾರಿ ನಡೆಸಲಾಗಿದೆ.
ಈಗಾಗಲೇ ಬಿಜೆಪಿಯಲ್ಲಿ ಸಚಿವ ಸ್ಥಾನಕ್ಕಾಗಿ ಶಾಸಕರು ಲಾಬಿ ನಡೆಸುತ್ತಿದ್ದು, ಸಿಎಂ ಅವರನ್ನು ಭೇಟಿ ಮಾಡಿ ಸಚಿವ ಸ್ಥಾನಕ್ಕಾಗಿ ಮನವಿ ಮಾಡುತ್ತಿದ್ದಾರೆ. ಇದೀಗ ಡಿ.22ರಂದು ಯಾರಿಗೆ ಸಚಿವ ಸ್ಥಾನ ಒಲಿದಿದೆ ಎಂಬ ವಿಚಾರ ತಿಳಿಯಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ