ಹಾಸನ:
ಗೃಹ ಪ್ರವೇಶ ಆಹಾರ ಸೇವಿಸಿ 40 ಮಂದಿ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಗುಡ್ಡೇನಹಳ್ಳಿಯಲ್ಲಿ ಭಾನುವಾರ ನಡೆದಿದೆ.
ಹಾಸನದ ಹೊರವಲಯದ ಗುಡ್ಡೇನಹಳ್ಳಿ ಗ್ರಾಮದ ದೇವರಾಜು ಎಂಬುವವರ ಮನೆಯ ಗೃಹಪ್ರವೇಶವಿತ್ತು. ಈ ವೇಳೆ ಕಾರ್ಯಕ್ರಮಕ್ಕೆ ಬಂದಿದ್ದವರು ಊಟ ಮಾಡಿದ ಬಳಿಕ ವಾಂತಿ, ಭೇದಿ ಶುರುವಾಗಿ ಪುರುಷರು, ಮಹಿಳೆಯರು ಮತ್ತು ಮಕ್ಕಳು ಸೇರಿ 40 ಮಂದಿ ಅಸ್ವಸ್ಥಗೊಂಡಿದ್ದಾರೆ.
ತಕ್ಷಣ ಅವರನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ಸ್ಥಳೀಯರು ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಆರೋಗ್ಯ ಅಧಿಕಾರಿಗಳು, ಕಾರ್ಯಕ್ರಮಕ್ಕೆ ಮಾಡಿದ ಆಹಾರ ಮಾದರಿಯನ್ನು ಪಡೆದು ಪರಿಶೀಲನೆಗೆ ಮುಂದಾಗಿದ್ದಾರೆ.
ಈ ಸಂಬಂಧ ಪೆನ್ಷನ್ ಮೊಹಲ್ಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ