ಕಾಂಗ್ರೆಸ್ ಶಾಸಕನ ಆಪ್ತನ ಮನೆಯಲ್ಲಿ ಸ್ಫೋಟಕ ವಸ್ತುಗಳು ಪತ್ತೆ!

ಚಿಕ್ಕಮಗಳೂರು :

      ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡರ  ಆಪ್ತನ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ.

     ಶಾಸಕರ ಆಪ್ತನಾಗಿರುವ ಶಬರೀಶ್ ರವರ  ಶೃಂಗೇರಿ ಪಟ್ಟಣದ ಕಾಂಚಿನಗರದಲ್ಲಿರುವ ಮನೆಯಲ್ಲಿ ಸಂಗ್ರಹಿಸಿದ್ದ ನಕ್ಷತ್ರ ಆಮೆ, ಕಲ್ಲು ಆಮೆ, ಗನ್, ಪಿಸ್ತೂಲ್, ಬುಲೆಟ್​ಗಳು, ಗಂಧದ ತುಂಡು, ಜಿಲೆಟಿನ್ ಕಡ್ಡಿ, ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ. ಈ ವಸ್ತುಗಳನ್ನು ಅಕ್ರಮವಾಗಿ ಸಂಗ್ರಹಿಸಿಡಲಾಗಿತ್ತು ಎನ್ನಲಾಗಿದೆ.

       ಈ ವಸ್ತುಗಳನ್ನು ವಶಪಡಿಸಿಕೊಂಡ  ಪೊಲೀಸ್ ಅಧಿಕಾರಿಗಳು ಮನೆಯಲ್ಲಿದ್ದ ಶಬರೀಶ್ ನ ತಂದೆ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಶಬರೀಶ್ ನ ಮನೆಯಲ್ಲಿ ಸ್ಫೋಟಕ ವಸ್ತುಗಳು ದೊರೆತ ಹಿನ್ನಲೆಯಲ್ಲಿ ಪೊಲೀಸರಿಗೆ ಈತನ ಮೇಲೆ ಹಲವು ಅನುಮಾನಗಳು ವ್ಯಕ್ತವಾಗಿದೆ. 

        ಶಾಸಕರ ಆಪ್ತ ಶಬರೀಶ್​ ಆನೆದಂತ ಕಳ್ಳ ಸಾಗಾಟ ಮಾಡುತ್ತಿದ್ದ ವೇಳೆ 2 ದಿನಗಳ ಹಿಂದೆ ಆತನನ್ನು ಬಂಧಿಸಲಾಗಿತ್ತು. ಬಂಧನದ ಬಳಿಕ ಶಬರೀಶ್ ಮನೆ ಮೇಲೆ ದಾಳಿ ನಡೆಸಲಾಗಿತ್ತು. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap