ರಾಯಚೂರು :
‘ಮತ್ತೆ ಕಾಂಗ್ರೆಸ್ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಶೀಘ್ರದಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್ ಯಡಿಯೂರಪ್ಪ ರಾಜೀನಾಮೆ ನೀಡಬೇಕಾಗುತ್ತದೆ. ಮತ್ತೆ ಕಾಂಗ್ರೆಸ್ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.
ತಾವು 15 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದು, ಈ ಪೈಕಿ ಕನಿಷ್ಠ 12 ಕ್ಷೇತ್ರಗಳಲ್ಲಿ ನಾವೇ ಗೆಲ್ಲಲಿದ್ದೇವೆ ಎಂಬುದು ಗೊತ್ತಾಗಿದೆ. ಫಲಿತಾಂಶದ ಬಳಿಕ ಮರು ಹೊಂದಾಣಿಕೆ ಬಗ್ಗೆ ಮಾತಾಡಲಿದ್ದೇವೆ. ಒಮ್ಮೆ ಮಾಜಿ ಪ್ರಧಾನಿ ದೇವೇಗೌಡರು ಹೊಂದಾಣಿಕೆ ಸಾಧ್ಯವೇ ಇಲ್ಲ ಎನ್ನುತ್ತಾರೆ, ಇನ್ನೊಮ್ಮೆ ಸೋನಿಯಾ ಗಾಂಧಿಯವರೊಂದಿಗೆ ಮಾತಾಡುತ್ತೇನೆ ಎಂದು ಹೇಳುತ್ತಾರೆ. ಹೀಗಾಗಿ ಎಲ್ಲವೂ ಫಲಿತಾಂಶದ ಬಳಿಕವೇ ಅಂತಿಮವಾಗಲಿದೆ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ