ಬೆಂಗಳೂರು :
ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರ ಮೊಮ್ಮಗ ಧವನ್ ಗೆ ಕ್ವಾರಂಟೈನ್ ಗೆ ಒಳಗಾಗುವಂತೆ ಸೂಚನೆ ನೀಡಲಾಗಿದೆ.
ಹೌದು, ಆಗಸ್ಟ್ 2 ರಂದು ಸಿದ್ದರಾಮಯ್ಯ ಮೈಸೂರಿಗೆ ತೆರಳಿದ್ದರು. ಈ ವೇಳೆ ತಮ್ಮ ಮೊಮ್ಮಗ ದಿ.ರಾಕೇಶ್ ಪುತ್ರ ಧವನ್ ಜೊತೆ ಚೆಸ್ ಆಡಿದ್ದರು.
ಇದೀಗ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ತಗುಲಿರುವುದರಿಂದ ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ಧವನ್ ಕ್ವಾರಂಟೈನ್ ಗೆ ಒಳಗಾಗುವಂತೆ ದೊಡ್ಡಪ್ಪ ಡಾ.ಯತೀಂದ್ರ ಸೂಚಿಸಿದ್ದಾರೆ.
ಸದ್ಯ ಸಿದ್ದರಾಮಯ್ಯ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಿರುವಾಗ ಇತ್ತೀಚೆಗೆ ಅವರನ್ನು ಸಂಪರ್ಕಿಸಿದವರೆಲ್ಲರಿಗೂ ಕ್ವಾರಂಟೈನ್ ಆಗುವಂತೆ ಸೂಚನೆ ನೀಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ