ಮೈಸೂರು:
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ಸೆಲ್ಫಿ ತೆಗೆಯಲು ಬಂದ ಅಭಿಮಾನಿಯೊಬ್ಬನಿಗೆ ಸಿದ್ದು ಏಟು ಕೊಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ.
ಅವರು ಕನಕ ಪೀಠದ ಸಮುದಾಯ ಭವನ ಉದ್ಘಾಟನೆ ಮಾಡಲು ಆಗಮಿಸಿದ್ದರು. ಈ ವೇಳೆ ಅಭಿಮಾನಿಗಳು ಸಿದ್ದರಾಮಯ್ಯ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿ ಬಿದ್ದಿದ್ದರು. ಈ ವೇಳೆ ಸಿದ್ದರಾಮಯ್ಯ ಜನ ಜಂಗುಳಿ ನಡುವೆ ಸಿಕ್ಕಿಹಾಕಿಕೊಂಡಿದ್ದರು. ಅಭಿಮಾನಿಯೊಬ್ಬ ಸಿದ್ದರಾಮಯ್ಯ ಅವರ ಜತೆ ಸೆಲ್ಫಿ ತೆಗೆದುಕೊಳ್ಳಲು ಬಂದಿದ್ದರು.
ಈ ವೇಳೆ ತಾಳ್ಮೆ ಕಳೆದುಕೊಂಡ ಸಿದ್ಧರಾಮಯ್ಯ ಅಭಿಮಾನಿಯನ್ನು ಪಕ್ಕಕ್ಕೆ ತಳ್ಳಿ ಬೆನ್ನಿಗೆ ಬಾರಿಸಿದ ಘಟನೆ ನಡೆದಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ